
ಬೇಲೂರು: ಬೇಲೂರು ತಾಲ್ಲೂಕು ಹಳೇಬೀಡು ಹೋಬಳಿ ಸಾಣೇನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ತನ್ನ ಬೀರೇಗೌಡ ಅವರು ತಮ್ಮ ಜೀವನೋಪಾಯಕ್ಕಾಗಿ ಸಾಕಿದ 2 ಸಿಂಧಿ ಹಸುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇತ್ತೀಚೆಗೆ ಅಬ್ಬರದ ಮಳೆ ಸುರಿದ ಪರಿಣಾಮವಾಗಿ ಗ್ರಾಮದಲ್ಲಿ ಆತಂಕ ಸೃಷ್ಟಿಸಿದೆ. ಹೊಲದ ಬಳಿ ಕಟ್ಟಿ ಹಾಕಿದ್ದ ಹಸುಗಳ ಮೇಲೆ ಸಿಡಿಲು ಬಡಿದ ಪರಿಣಾಮ ಹಸುಗಳು ಸ್ಥಳದಲ್ಲೇ ಮೃತಪಟ್ಟಿವೆ. ಜೀವನೋಪಾಯಕ್ಕಾಗಿ ಹೈನುಗಾರಿಕೆಯನ್ನೆ ಅವಲಂಭಿಸಿಕೊಂಡಿದ್ದ ಬೀರೇಗೌಡರ ಕುಟುಂಬಕ್ಕೆ ಆರ್ಥಿಕ ಹೊಡೆತ ಬಿದ್ದಿದೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿ, ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಆಗಮಿಸಿದ ಪಶುವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿ ಸಿಡಿಲಿನ ಪ್ರಭಾವವೇ ಹಸುಗಳ ಸಾವಿಗೆ ಕಾರಣ ಎಂದು ದೃಢಪಡಿಸಲಿಗಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಹಾಗೂ ಪಶುಸಂಗೋಪನಾ ಇಲಾಖೆ ಸೇರಿ ತಕ್ಷಣ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು. ಹಾಗೂ ಸಿಡಿಲಿನ ಬಗ್ಗೆ ಮುನ್ನೆಚ್ಚರಿಕೆಯಾಗಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ಒತ್ತಾಯಿಸಲಾಯಿತು.
