ಅರಣ್ಯ ಜಾಗದಲ್ಲಿ ಅಕ್ರಮ ಗುಡಿಸಲು ನಿರ್ಮಾಣ: ಅರ್ಜುನನ ಸ್ಮಾರಕ ಉದ್ಘಾಟನಾ ಸ್ಥಳದಲ್ಲೇ ಪ್ರತಿಭಟನೆ: ಕರವೇ ಅಧ್ಯಕ್ಷ ಗಗನ್ ಹಾಡ್ಲಹಳ್ಳಿ.

Oplus_131072

ಸಕಲೇಶಪುರ: ಸಕಲೇಶಪುರ ತಾಲೂಕು ದೇವಾಲಕೇರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಡಚಳ್ಳಿ ಅರಣ್ಯ ಪ್ರದೇಶದ ಸ ನಂ. 28 ರಲ್ಲಿ ಅನಧಿಕೃತವಾಗಿ ಗುಡಿಸಲುಗಳು ನಿರ್ಮಾಣವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೊರ ರಾಜ್ಯದವರ ಅಕ್ರಮ ಗುಡಿಸಲು ಎಂದು ವ್ಯಕ್ತವಾಗಿದ್ದು, ಪ್ರಕರಣ ಕುರಿತು ಸಂಪೂರ್ಣ ತನಿಖೆ ನಡೆಸುವಂತೆ ಕರವೇ ಅಧ್ಯಕ್ಷ ಗಗನ್ ಹಾಡ್ಲಹಳ್ಳಿ ಆಗ್ರಹಿಸಿದ್ದಾರೆ. ಈ ಸಂಬಂಧ ಅರಣ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿ ಸುದ್ದಿ ಗೋಷ್ಠಿ ನಡೆಸಿ RFO ಹೇಮಂತ್ ಕುಮಾರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಲಾಗಿತ್ತು. ಸ್ಥಳೀಯರಿಗೆ ಅರಣ್ಯ ಕಾಯ್ದೆಯಡಿ ನೋಟಿಸ್ ನೀಡಲಾಗಿದ್ದು, ಅಕ್ರಮ ವಾಸಸ್ಥಳಗಳಿಗೆ ನೀರು ಮತ್ತು ವಿದ್ಯುತ್ ಸೌಲಭ್ಯ ಒದಗಿಸಿರುವುದು ಆಡಳಿತದ ದ್ವಂದ್ವ ನೀತಿಯನ್ನು ಬಯಲಿಗೆಳೆಯುತ್ತಿದೆ. ಎಂದು ಆರೋಪಿಸಿದ್ದಾರೆ.ಪ್ರಕರಣದಲ್ಲಿ ಕೆಲವು ಅಧಿಕಾರಿಗಳು ಹಾಗೂ ಪ್ರಭಾವಿಗಳ ಕೈವಾಡದ ಶಂಕೆ ವ್ಯಕ್ತವಾಗಿದ್ದು, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದಕ್ಕೆ ಕರವೇ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.ಈ ಹಿನ್ನೆಲೆಯಲ್ಲಿ ನಾಳೆ ಅರ್ಜುನನ ಸ್ಮಾರಕ ಉದ್ಘಾಟನಾ ಸಮಾರಂಭಕ್ಕೆ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ರವರು ಆಗಮಿಸಲಿದ್ದು, ಕಾರ್ಯಕ್ರಮದ ವೇಳೆ ಸಂಬಂಧಪಟ್ಟವರ ವಿರುದ್ಧ ಕೈ ಗೊಳ್ಳುವ ವರೆಗೆ ಉದ್ಘಾಟನೆಗೆ ಅವಕಾಶ ನೀಡುವುದಿಲ್ಲ ಎಂದು ತಾಲೂಕು ಕರವೇ (ನಾರಾಯಣ ಗೌಡ) ಬಣ ಕರೆ ನೀಡಿದೆ. ಹಾಗೂ RFO ಹೇಮಂತ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವ ವರೆಗೆ ಉದ್ಘಾಟನಾ ಕಾರ್ಯಕ್ರಮ ಸ್ಥಳದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಾಲೂಕು ಕರವೇ ಅಧ್ಯಕ್ಷ ಗಗನ್ ಹಾಡ್ಲಹಳ್ಳಿ ತಿಳಿಸಿದ್ದಾರೆ.ನಾಳೆ ನಡೆಯಲಿರುವ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕರವೇ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಕರೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!