ಟ್ರಾನ್ಸ್ಪರ್ಮರ್ ಸರಿ ಮಾಡದ ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯ

Oplus_131072

ಬೇಲೂರು: ತಾಲ್ಲೂಕಿನ ಮಾದಿಹಳ್ಳಿ ಹೋಬಳಿ, ಮಾದಿಹಳ್ಳಿ ಗ್ರಾಮದಲ್ಲಿ ಸುಮಾರು ಎರಡು ತಿಂಗಳುಗಳಿಂದ ವಿದ್ಯುತ್ ಪರಿವರ್ತಕ ಸುಟ್ಟು ಹೋಗಿದ್ದು, ಮಾದಿಹಳ್ಳಿ ಗ್ರಾಮದ ಜನರು ವಿದ್ಯುತ್ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಾಗೂ ರೈತರು ನೀರು ಹಾಯಿಸಲು ವಿದ್ಯುತ್ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಇರುವುದು ಅಧಿಕಾರಿಗಳ ವೈಫಲ್ಯ ವೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರಿಗೆ ಕ್ಯಾರೇ ಎನ್ನದ ಅಧಿಕಾರಿಗಳು ಹಾಗೂ ಸರ್ಕಾರದ ಪ್ರತಿನಿಧಿಗಳ ಬೇಜವಾಬ್ದಾರಿ ಎಂದಿದ್ದಾರೆ. ರೈತರಿಗೆ ಸ್ಪಂದಿಸದ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯಬೇಕು ಎಂದರು.

Leave a Reply

Your email address will not be published. Required fields are marked *

error: Content is protected !!