ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ. ಕೇಂದ್ರ ಸರ್ಕಾರ ನೇರ ಹೊಣೆ – ರಾಜ್ಯ ಯುವ ಕಾಂಗ್ರೆಸ್ ಸಮಿತಿ ಪ್ರತಿಭಟನೆ

Oplus_131072

ಬೆಂಗಳೂರು:- ಫ್ರೀಡಂ ಪಾರ್ಕಿನಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ. ಪ್ರಶ್ನೆ ಪತ್ರಿಕೆ ಬಹಿರಂಗದಲ್ಲಿ ಕೇಂದ್ರ ಸರ್ಕಾರದ ಪ್ರಧಾನಿ ನರೇಂದ್ರ ಮೋದಿ ರವರ ಆಡಳಿತ ಪತ್ರಿಕೆ ವ್ಯವಸ್ಥೆ ಮತ್ತು ಭ್ರಷ್ಟಾಚಾರದ ವಿರುದ್ದ ರಾಜ್ಯ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ S H ಮಂಜುನಾಥ್ ರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಮಂಜುನಾಥ್ ರವರು ಮಾತನಾಡಿ ಬಿಜೆಪಿ ಸರ್ಕಾರ ನಿರಂತರವಾಗಿ ಪ್ರಶ್ನೆ ಪತ್ರಿಕೆಯ ಸೋರಿಕೆ ಹಗರಣ ನಡೆಸುತ್ತಿದೆ. 2024 ರಲ್ಲಿ ಮತ್ತು 2026 ರಲ್ಲಿ ಹಗರಣ ನಡೆದಿದೆ.

ಲಕ್ಷಾಂತರ ಬೇಡ ಮಕ್ಕಳು ವೈದ್ಯರಾಗುವ ಕನಸಿಗೆ ಕೇಂದ್ರ ಸರ್ಕಾರ ಕೊಳ್ಳಿ ಇಟ್ಟಿದೆ. ಓದಿ ಪಾಸಾಗುವ ವಿದ್ಯಾರ್ಥಿಗಳಿಗೆ ಇಂದು ಭವಿಷ್ಯವಿಲ್ಲ. ಕಾಫಿ ಮಾಡಿ ಪಾಸಾಗುವ ಶ್ರೀಮಂತರ ಮಕ್ಕಳು ವೈದ್ಯರಾಗುತ್ತಾರೆ.

ಹಲವಾರು ತಿಂಗಳ ಕಾಲ ಪೀಸ್ ಕಟ್ಟಿ ನೀಟ್ ಪರೀಕ್ಷೆ ತಯಾರಾಗುವ ವಿದ್ಯಾರ್ಥಿಗಳು ಮರು ಪರೀಕ್ಷೆಯಿಂದ ಮತ್ತೆ ತಯಾರಾಗಿ ಹಣ ಖರ್ಚು ಮಾಡುತ್ತಾರೆ. ಬಡ ಮಕ್ಕಳ ಮತ್ತು ರೈತರ ಮಕ್ಕಳ ಸಂಕಷ್ಟಗಳನ್ನು ಕೇಂದ್ರ ಸರ್ಕಾರ ಗಮನ ಹರಿಸುತ್ತಿಲ್ಲ.

22 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದಾರೆ. ಮತ್ತೆ ಮರು ಪರೀಕ್ಷೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಶಿಕ್ಷಣದ ಅರಿವು ಇಲ್ಲದ ಕೇಂದ್ರ ಸರ್ಕಾರ ಮಕ್ಕಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿದೆ.

ಕೇಂದ್ರ ಸರ್ಕಾರ 2 ಕೋಟಿ ಉದ್ಯೋಗ ನೀಡಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಪ್ರಶ್ನೆ ಮಾಡುವ ಯಾವ ನೈತಿಕತೆ ಇದೆ ಎಂದರು. ಪೇಪರ್ ಸೋರಿಕೆಯ ಮಾಫಿಯಾ ಗೆ ಕಡಿವಾಣ ಹಾಕಬೇಕು. ಮತ್ತು ಇದರ ಹಿಂದಿನ ಶಕ್ತಿಗಳನ್ನು ಬಂಧಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ ಎಂದರು.

Leave a Reply

Your email address will not be published. Required fields are marked *

error: Content is protected !!