ಸರ್ಕಾರಿ ಆಸ್ಪತ್ರೆಯ ಖಾಸಗೀಕರಣ ಕೈ ಬಿಡಿ – ಆರೋಗ್ಯ ಇಲಾಖೆಯ ಆದೇಶ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ.

Oplus_131072

ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯ 4 ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಆದೇಶವನ್ನು ಆರೋಗ್ಯ ಇಲಾಖೆ ಹಿಂಪಡೆಯಬೇಕು ಎಂದು ಆಗ್ರಹಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ ನಡೆಸಿದರು. ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಹೊರಟ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು ಮೆರವಣಿಗೆಯುದ್ದಕ್ಕೂ ಆರೋಗ್ಯ ಸಚಿವರು ಆಗಿರುವ ದಿನೇಶ್ ಗುಂಡೂರಾವ್ ವಿರುದ್ಧ ಘೋಷಣೆ ಕೂಗುತ್ತ ಬಳಿಕ ಮಿನಿ ವಿಧಾನಸೌಧ ಮುಂಭಾಗದಲ್ಲಿ ಸಭೆ ನಡೆಯಿತು.ಪ್ರತಿಭಟನೆಯ ಅಧ್ಯಕ್ಷತೆಯನ್ನು ಕೆ. ಯಾದವ್ ಶೆಟ್ಟಿ ವಹಿಸಿದ್ದರು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮುನೀರ್ ಕಾಟಿಪಳ್ಳ ದಕ್ಷಿಣ ಕನ್ನಡ ಜಿಲ್ಲೆ ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಕಾರ್ಪೊರೇಟ್ ಆಸ್ಪತ್ರೆಗಳ ಹಿಡಿತಕ್ಕೆ ಸಿಲುಕಿದೆ.ಮಂಗಳೂರನ್ನು ಉತ್ತಮ ಚಿಕಿತ್ಸೆ ಸಿಗುವ ನಗರ ಎಂದು ಹೇಳಾಲಾಗುತ್ತಿದ್ದರು, ವಾಸ್ತವವಾಗಿ ಖಾಸಗಿ ಆಸ್ಪತ್ರೆಗಳು ಸಾಮಾನ್ಯ ಜನರಿಗೆ ಸುಲಿಗೆಯ ಕೇಂದ್ರಗಳಾಗಿವೆ ಎಂದರು.ಖಾಸಗಿ ಆಸ್ಪತ್ರೆಗಳ ದುಬಾರಿ ವೆಚ್ಚ ಭರಿಸಲಾಗದೆ. ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತೀವೆ. ಸಾಮಾಜಿಕ ಜಾಲ ತಾಣಗಳಲ್ಲಿ ದೇಣಿಗೆ ಸಂಗ್ರಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಇಂತಹ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳಿಗೆ ಹಸ್ತಾಂತರಿಸುವುದು ಬಡವರ ಹಕ್ಕಿನ ನಿರಾಕರಣೆಯಾಗಿದೆ ಎಂದರು. ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣವು ಸಾರ್ವಜನಿಕ ಆರೋಗ್ಯ ಸೇವೆಯನ್ನು ಸಂಪೂರ್ಣ ಖಾಸಗೀಕರಣದತ್ತ ಕೊಂಡೊಯ್ಯುವ ಬಡ ರೋಗಿಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳ ಕಲಿಕಾ ಸಾಧನಗಳಾಗಿ ಮಾಡುತ್ತದೆ ಎಂದು ಆರೋಪಿಸಿದರು.ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ರಸ್ತೆಯಲ್ಲಿ ತಡೆದು ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಮುನೀರ್ ಕಾಟಿಪಳ್ಳ ಎಚ್ಚರಿಕೆ ನೀಡಿದರು.ಇದೇ ವೇಳೆ ಮಾತನಾಡಿದ ಸುನೀಲ್ ಕುಮಾರ್ ಬಜಾಲ್ ಆರೋಗ್ಯ ಕ್ಷೇತ್ರದ ಖಾಸಗೀಕರಣವನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು, ಕಾಂಗ್ರೆಸ್ ಸರ್ಕಾರದ ಈ ತೀರ್ಮಾನವನ್ನು ಬಿಜೆಪಿ ಸರ್ಕಾರ ಪ್ರಶ್ನಿಸದೆ ಇರುವುದು ಈ ಒಪ್ಪಂದದಲ್ಲಿ ಬಿಜೆಪಿ ಸರ್ಕಾರ ಶಾಮೀಲಾಗಿದೆ ಎಂದು ತೋರುತ್ತದೆ ಎಂದರು. ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಪರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಕೆಲಸ ಮಾಡುತ್ತಿವೆ ಎಂದರು. ಈ ವಿಚಾರದಲ್ಲಿ ಬಿಜೆಪಿಯ ಮೌನವೇ ಇದಕ್ಕೆ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನಾ ಸಭೆಯಲ್ಲಿ ಡಾ. ಕೃಷ್ಣಪ್ಪ ಕೊಂಚಾಡಿ. ಬಿ. ಎಂ. ಭಟ್. ವಸಂತ ಆಚಾರಿ. ಜಯಂತಿ ಶೆಟ್ಟಿ. ಹಾಗೂ ಸುಕುಮಾರ್ ತೊಕ್ಕೊಟ್ಟು ಉಪಸ್ಥಿತರಿದ್ದರು.ಜಿಲ್ಲಾ ಸಮಿತಿ ಸದಸ್ಯ ಮನೋಜ್ ವಾಮಂಜೂರು. ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಸದಾಶಿವ ದಾಸ್ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!